ಧಾರವಾಡ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್.ಮೋರೆ (84) ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಧಾರವಾಡ ಕ್ಷೇತ್ರದಿಂದ ನಾಲ್ಕು ಬಾರಿ ಅವರು ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಎಸ್.ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಹಕಾರ ಸಚಿವರಾಗಿದ್ದರು.
ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಈ ಭಾಗದಲ್ಲಿ ಆಶ್ರಯ ಮನೆಗಳನ್ನು ಸಾಕಷ್ಟು ಬಡವರಿಗೆ ಕೊಡಿಸಿದ್ದರಿಂದ ಅವರನ್ನು ಆಶ್ರಯ ಮನೆಗಳ ಹರಿಕಾರ ಎಂದೇ ಕರೆಯಲಾಗುತ್ತಿತ್ತು. ಜತೆಗೆ ಹುಬ್ಬಳ್ಳಿ ಧಾರವಾಡ ಜನರಿಗೆ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ಸಾಕಷ್ಟು ಶ್ರಮಿಸಿದ್ದರು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಡಿ. 9ರಂದು ಅವರ ಜನ್ಮದಿನವಿತ್ತು. ಮೃತರಿಗೆ ಮೂವರು ಪುತ್ರಿಯರು ಇದ್ದಾರೆ.ಮೋರೆ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತ್ಯಕ್ರಿಯೆ ಮೋರೆ ಫಾರ್ಮ್ ಹೌಸ್‌ನಲ್ಲಿ ಗುರುವಾರ ಸಂಜೆ 5.30 ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

