Breaking News

ರಾಜ್ಯದಲ್ಲಿ ಸದ್ಯಕ್ಕಿಲ್ಲ ನೈಟ್‌ ಕರ್ಪ್ಯೂ-ವಾರದ ಬಳಿಕ ನಿರ್ಧಾರ-ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಕುರಿತು ಯಾರೂ ಕೂಡಾ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ಒಂದು ವಾರದ ಬಳಿಕ ಈ ಕುರಿತು ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ​ ಬೊಮ್ಮಾಯಿ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ, ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ ವರ್ಷಕ್ಕೆ ಒಂದು ವಾರ ನೋಡಿಕೊಂಡು ಕೆಲ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಒಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಯಾರೂ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಹಾಸ್ಟೆಲ್​ಗಳಿಗೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಒಂದೇ ಬಾರಿ ಎಲ್ಲಾ ವಿದ್ಯಾರ್ಥಿಗಳು ಊಟಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ. ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು ಎಂದರು.

ವ್ಯಾಕ್ಸಿನ್ ಡ್ರೈವ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಹಾಸ್ಟೆಲ್, ಕ್ಲಸ್ಟರ್​ಗೆ ಮಾತ್ರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಯಾವುದೇ ಹೊಸ ಗೈಡ್‌ಲೈನ್ಸ್ ಇಲ್ಲ ಎಂದರು.

ಸಭೆಗೆ ಆರೋಗ್ಯ ಸಚಿವ ಸುಧಾಕರ್‌ ಗೈರು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಧಾಕರ್‌ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಅಂತಾ ನನ್ನ ಅನುಮತಿ ಪಡೆದಿದ್ರು ಎಂದು ಸಮರ್ಥಿಸಿಕೊಂಡರು.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *