ನವದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಇಂದು ಬೆಳಿಗ್ಗೆ ನಿಗೂಢ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರರಾಜಧಾನಿ ದೆಹಲಿಯ ನ್ಯಾಯಾಲಯದಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಲ್ಯಾಪ್ ಟಾಪ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸದ್ಯಕ್ಕೆ ಘಟನಾ ಸ್ಥಳಕ್ಕೆ ಏಳು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ ಎಂದು ವರದಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

