Breaking News

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ: ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್ ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ನವನಗರದಲ್ಲಿ ಕಾನೂನಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹಲವು ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕೆಲ ದಿನಗಳಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೂ ಬೇಡಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.

ಇದರ ಬೆನ್ನಲ್ಲೇ ನವನಗರದ ಆರ್.ಟಿ.ಓ ಕಚೇರಿಯಿಂದ ಕಾನೂನು ವಿವಿವರೆಗೂ ವಿವಿಧ ಜಿಲ್ಲೆಗಳಿಂದ ಬಂದಂತಹ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಕಾನೂನು ವಿವಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *