Breaking News

ಹೆಲಿಕಾಪ್ಟರ್‌ ದುರಂತ-ಬಿಪಿನ್‌ ರಾವತ್‌ ನಿಧನಕ್ಕೆ ಸಂತಾಪ ಸೂಚಿಸಿದ ಟಿಬೇಟ್‌ ಗುರು ದಲೈಲಾಮಾ

ಟಿಬೆಟ್: ಮಾರಣಾಂತಿಕ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಗುರುವಾರ ಸಂತಾಪ ಸೂಚಿಸಿದ್ದಾರೆ.

‘ನಾನು ಜನರಲ್ ಬಿಪಿನ್ ರಾವತ್ ಮತ್ತು ಅವರ ಸಹಚರರಿಗಾಗಿ ಪ್ರಾರ್ಥಿಸುತ್ತೇನೆ ಮತ್ತು ಈ ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲ ಕುಟುಂಬಗಳ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ.

ರಾಷ್ಟ್ರದ ಸೇವೆಯಲ್ಲಿ ಜನರಲ್ ರಾವತ್ ಅವರ ದೀರ್ಘಕಾಲದ ಕೊಡುಗೆಯನ್ನು ನಾನು ವಂದಿಸುತ್ತೇನೆ’ ಎಂದು ಆಧ್ಯಾತ್ಮಿಕ ನಾಯಕ ದಲೈಲಾಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ MI-17ವಿ5 ಹೆಲಿಕಾಪ್ಟರ್ ಬುಧವಾರ ನೀಲಗಿರಿಯ ಕಟ್ಟೇರಿಯಲ್ಲಿ ಪತನಗೊಂಡ ನಂತರ ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು 12 ರಕ್ಷಣಾ ಸಿಬ್ಬಂದಿ ಸಾವನ್ನಪ್ಪಿದ್ದರು.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *