Breaking News

ಹೊಸ ವರ್ಷ ಹಾಗೂ‌ ಕ್ರಿಸ್ಮಸ್ ಗೆ ಯಾವುದೇ ನಿರ್ಭಂದ ಇಲ್ಲ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಓಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.

ಇನ್ನೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಕಾರ್ಯ ಆರಂಭವಾಗಿದ್ದು, ಅದಕ್ಕಾಗಿ ಪರಿಹಾರ ಆ್ಯಪ್ ಮೂಲಕ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *