Breaking News

ಹಾಸ್ಟೆಲ್​ ಬಳಿ ಗಾಂಜಾ ಮಾರಾಟ ಪ್ರಕರಣ: ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಆನಂದ ಒನಕುದ್ರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ 1.1ಕೆಜಿ ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿತ್ತು.ಈ ಪ್ರಕರಣ ವಿಚಾರಣೆ ನಡೆಸಿದ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಮಂಜುನಾಥ ಭಟ್ ಅಡಿಗ ಆದೇಶ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ವಿ. ಪಾಟೀಲ ವಾದ ಮಂಡಿಸಿದ್ದರು

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *