Breaking News

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಕಿಚ್ಚ ಸುದೀಪ್

ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ಕುಕ್ಕೆಗೆ ಸುದೀಪ್​ ಕುಟುಂಬದ ಭೇಟಿ : ಬಳಿಕ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು.

ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು.ಸದ್ಯ ಟೈಟಲ್ ಹಾಗೂ ಟೀಸರ್​ನಿಂದಲೇ ಸುದೀಪ್ ವಿಕ್ರಾಂತ್ ರೋಣ ಭಾರತೀಯ ಚಿತ್ರರಂಗದಲ್ಲಿ ಭಾರೀ ಹೈಪ್ ಕ್ರಿಯೇಟ್​ ಮಾಡಿದೆ. ಮುಂದಿನ ವರ್ಷ ಫೆಬ್ರವರಿ 24ರಂದು ದೇಶಾದ್ಯಂತ ಚಿತ್ರ ತೆರೆಗೆ ಬರಲಿದೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *