ಹುಬ್ಬಳ್ಳಿ: ನಾಳೆ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆ ಅನ್ನುವ ವಿಶ್ವಾಸ ಇದೆ ಎಂದರು.
ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧ ಇದ್ದೆ ಇರುತ್ತೆ. ನಮ್ಮ ಅಪೇಕ್ಷೆ ಸಹ ನಿಷೇಧ ಮಾಡೋದು ಇದೆ. ಹಲವು ರಾಜ್ಯಗಳಲ್ಲಿ ಮತಾಂತರ ಕಾಯ್ದೆ ಜಾರಿ ಆಗಿದೆ. ಮತಾಂತರ ನಿಷೇಧ ಕಾಯ್ದೆ ಅಧಿವೇಶನದಲ್ಲಿ ಪಾಸ್ ಆಗಲಿದೆ. ಅಧಿವೇಶನ ಮುಗಿಯುವ ಕೆಲ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿ ಆಗಲಿದೆ. ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.
ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ರಾಯರೆಡ್ಡಿ ಹೇಳಿಕೆ ವಿಚಾರವಘಾಇ ಮಾತನಾಡಿದ ಅವರು, ಅದರಲ್ಲಿ ಸತ್ಯಾಂಶ ಇಲ್ಲ, ಎಲ್ಲ ರೀತಿಯ ಸಹಕಾರ ಸಿಗುತ್ತಿದೆ. ಬಿಜೆಪಿಯಲ್ಲಿ ಅವರ ಅವಧಿಯನ್ನ ಬೊಮ್ಮಾಯಿ ಪೂರ್ಣಗೊಳಿಸುತ್ತಾರೆ ಎಂದು ಸ್ಪಷ್ಟನೆ ನೀಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

