Breaking News

ಇಂಗ್ಲೆಂಡ್​​ನಿಂದ ಬಂದ ಇಬ್ಬರು ಮಕ್ಕಳು ಸೇರಿ ಐವರಿಗೆ ಕೊರೊನಾ

ದೇವನಹಳ್ಳಿ : ವಿದೇಶದಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಮುಂಜಾನೆ ಇಂಗ್ಲೆಂಡ್​​ನಿಂದ ಬಂದ 5 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇಂದು ಮುಂಜಾನೆ ಯುಕೆಯಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಆಗಮಿಸಿದ್ದು, ಪ್ರಯಾಣಿಕರನ್ನ ಆರ್ ಟಿ ಪಿಸಿಆರ್ ಟೆಸ್ಟ್​​​ಗೆ ಒಳಪಡಿಸಿದ್ದಾಗ 5 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 18 ವರ್ಷದ ಇಬ್ಬರಿಗೆ, 6 ವರ್ಷದ ಇಬ್ಬರು ಮಕ್ಕಳಿಗೆ ಮತ್ತು 30 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ವರದಿಯಲ್ಲಿ ದೃಢಪಟ್ಟಿದೆ. ಸೋಂಕಿತರನ್ನು ಕೆಐಎಎಲ್ ನಿಂದ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *