ಶ್ರೀನಗರ: ನಗರದ ಹೊರವಲಯದ ರಂಗ್ರೆತ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಶೋಧಕಾರ್ಯ ನಡೆಯಿತು.
ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನು ಕೊಂದ ಒಂದು ದಿನದ ನಂತರ ಈ ಕಾರ್ಯಾಚರಣೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

