ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.

ರಾಜೇಶ್ವರಿ ತೇಜಸ್ವಿ ಅವರು ‘ನನ್ನ ತೇಜಸ್ವಿ’ ಮತ್ತು ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಪುಸ್ತಕಗಳನ್ನು ಬರೆದಿದ್ದಾರೆ.ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ರ ವರೆಗೆ ಅಂತಿಮ ದರ್ಶನ ಇರಲಿದೆ. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಖ್ಯಾತ ಸಾಹಿತಿ ಶ್ರೀ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ಶ್ರೀಮತಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಯವರ ನಿಧನ ಬಹಳ ದುಃಖ ತಂದಿದೆ. ತೇಜಸ್ವಿಯವರ ಬರಹಗಳಿಗೆ ಸ್ಪೂರ್ತಿಶಕ್ತಿಯಾಗಿದ್ದ ಅವರು ಕೂಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ನೋವು ಸಹಿಸುವ ಶಕ್ತಿ ದೊರೆಯಲಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

