Breaking News

ರಾಜ್ಯದಲ್ಲಿ “ಲವ್ ಜಿಹಾದ್” ವಿರುದ್ಧ ಕಠಿಣ ಕಾನೂನು-ಸಚಿವ ವಿ.ಸುನೀಲ ಕುಮಾರ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ಲವ್ ಜಿಹಾದ್ ನಿರ್ಬಂಧಕ್ಕೆ ಕಠಿಣ ಕಾನೂನು ಜಾರಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಭವಿಷ್ಯದಲ್ಲಿ ಲವ್ ಜಿಹಾದ್ ನಿಷೇಧಕ್ಕೆ ಕಠಿಣ ಕಾನೂನು ತರಲಾಗುತ್ತದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸುತ್ತಿರುವುದರ ನಡುವೆ ಇಂಥದೊಂದು ವಿಷಯ ಪ್ರಸ್ತಾಪಿಸಲಾಗಿದೆ.

“ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಯಾವಾಗಲೂ ಹೇಳುತ್ತೇವೆ. ಆ ಮಾತಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಮುಂಬರುವ ದಿನಗಳಲ್ಲಿ ಲವ್ ಜಿಹಾದ್ ವಿರೋಧಿ ಕಾಯ್ದೆಯನ್ನು ಜಾರಿಗೆ ತರಲಾಗುವುದು,” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *