ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದೆವು ಅದರಲ್ಲಿ 12 ಸ್ಥಾನ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 15 ಸೀಟು ಗೆಲ್ಲುವ ನಿರೀಕ್ಷೆ ಇತ್ತು, 12 ಸ್ಥಾನಗಳಲ್ಲಿ ಗೆದ್ದಿದ್ದೇವೆ.
ಇನ್ನೂ ಕೊನೆ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿಲ್ಲ. ಆದರೆ ಬೆಳಗಾವಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಉಳಿದಂತೆ ನಮಗೆ ಬಹುಮತ ದೊರೆತಿದೆ ಎಂದರು.
ಬಿಜೆಪಿಗೆ ಬಹುಮತ ಸಿಕ್ಕಿದೆ ಎಂದು ಜೆಡಿಎಸ್ ನ್ನು ನಿರ್ಲಕ್ಷ ಮಾಡಲ್ಲ. ನಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

