Breaking News

ಭಾರತ ಜಿಡಿಪಿ ಅಂದಾಜು ತಗ್ಗಿಸಿದ ‘ಎಡಿಬಿ’

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (ಒಟ್ಟು ಆಂತರಿಕ ಉತ್ಪಾದನೆ) ಕಾಣಲಿರುವ ಬೆಳವಣಿಗೆ ಕುರಿತು ಏಷ್ಯಾ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಈ ಹಿಂದೆ ಮಾಡಿದ್ದ ಅಂದಾಜನ್ನು ತಗ್ಗಿಸಿದೆ. ಉದ್ಯಮ ವಲಯದಲ್ಲಿ ಪೂರೈಕೆ ವ್ಯವಸ್ಥೆಯಲ್ಲಿ ಇರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅದು ಹೇಳಿದೆ.

ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 10ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸೆಪ್ಟೆಂಬರ್‌ನಲ್ಲಿ ಅದು ಹೇಳಿತ್ತು. ಆದನ್ನು ಈಗ ಶೇ 9.7ಕ್ಕೆ ತಗ್ಗಿಸಿದೆ. ದಕ್ಷಿಣ ಏಷ್ಯಾದ ಆರ್ಥಿಕ ಬೆಳವಣಿಗೆಯ ಕುರಿತು ಮಾಡಿದ್ದ ಅಂದಾಜನ್ನು ಸಹ ಶೇ 8.8ರಿಂದ ಶೇ 8.6ಕ್ಕೆ ಪರಿಷ್ಕರಿಸಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *