Breaking News

ವರದಕ್ಷಿಣೆ ಕಿರುಕುಳದಿಂದ ಚಾಮರಾಜನಗರದ ಮಹಿಳೆ ಸಾವು-ಮಹಿಳೆ ಸಾವಿನ ಸುತ್ತ ಅನುಮಾನದ ಹುತ್ತ

ಚಾಮರಾಜನಗರ : ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಉಡಿಗಾಲದಲ್ಲಿ ಸೋಮವಾರ ನಡೆದಿದೆ. ಉಡಿಗಾಲದ ಜಯಶಂಕರ್‌ ಎಂಬುವವರ ಪತ್ನಿ 24 ವರ್ಷದ ದಿವ್ಯಾ ಅವರು ಮೃತಪಟ್ಟವರು. ಮಗಳನ್ನು ವರದಕ್ಷಿಣೆಗಾಗಿ ಹಿಂಸಿಸಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ದಿವ್ಯ ಅವರ ತಂದೆ ದೇವಪ್ಪ ಅವರು ಚಾಮರಾಜನಗರದ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ದಿವ್ಯ ಅವರ ಪತಿ ಜಯಶಂಕರ್‌, ಮಾವ ಸಿದ್ದಮಲ್ಲಪ್ಪ, ಅತ್ತೆ ಸುಂದ್ರಮ್ಮ, ಬಾವ ಚಂದ್ರಶೇಖರ್‌ ಹಾಗೂ ಅವರ ಪತ್ನಿ ರೇಖಾ ಅವರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಗ್ರಾಮಾಂತರ ಸರ್ಕಲ್‌ ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ ತಿಳಿಸಿದರು.

ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ, ಸಬ್‌ ಇನ್‌ಸ್ಪೆಕ್ಟರ್‌ ಹನುಮಂತ ಉ‍ಪ್ಪಾರ್‌ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *