ಬೆಂಗಳೂರು: ‘ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ.
ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

