Breaking News

ಮುಂದಿನ 4 ದಿನಗಳವರೆಗೆ ಈ ಕಾರಣಕ್ಕೆ ಬ್ಯಾಂಕ್‌ ಕ್ಲೋಸ್‌, ಇಂದೇ ನಿಮ್ಮ ವ್ಯವಹಾರ ಮುಗಿಸಿಕೊಳ್ಳಿ..

ನವದೆಹಲಿ: ಡಿಸೆಂಬರ್ 16ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.16 ಮತ್ತು 17ರಂದು ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 18 ಮತ್ತು 19 ವಾರಾಂತ್ಯಗಳು, ಹೀಗಾಗಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಮುಷ್ಕರವನ್ನು ಮಾಡಲು ಮುಂದಾಗಿದೆ. ಖಾಸಗಿ ಮಾಧ್ಯಮಗಳ ವರದಿಗಳ ಪ್ರಕಾರ, ವರದಿಯ ಪ್ರಕಾರ, ಖಾಸಗೀಕರಣ ಪ್ರಕ್ರಿಯೆಯ ವಿರುದ್ಧ ಬ್ಯಾಂಕ್‌ಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಾವೆ ಎನ್ನಲಾಗಿದೆ. ಕೇಂದ್ರ ಸರ್ಕಾರವು 2021-22 ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣವನ್ನು ಪ್ರಸ್ತಾಪಿಸಿತ್ತು.

ಈ ನಡುವೆ ಖಾಸಗೀಕರಣಗೊಳ್ಳಲಿರುವ ಬ್ಯಾಂಕ್‌ಗಳ ಹೆಸರನ್ನು ಸರ್ಕಾರ ಇನ್ನೂ ನಿರ್ಧರಿಸಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ನೀತಿ ಆಯೋಗವು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗಳನ್ನು ಮಾರಾಟ ಮಾಡಲು ಶಿಫಾರಸು ಮಾಡಿದೆ ಎನ್ನಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *