Breaking News

ಮೊಟ್ಟೆ ವಿತರಣೆಗೆ ವಿರೋಧಿಸಿದವರ ವಿರುದ್ಧ ಧಿಕ್ಕಾರ: ವಾಣಿಜ್ಯನಗರಿಯಲ್ಲಿ ಸ್ವಾಮೀಜಿಗಳ ನಡೆಗೆ ವಿರೋಧ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಮಠಾಧೀಶರಿಂದ ವಿರೋಧ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಠಾಧೀಶರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಮತಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಮೊಟ್ಟೆ ವಿರೋಧಿಗಳಿಗೆ, ಸಂತರಿಗೆ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಸರ್ಕಾರ ಯಾರ ಒತ್ತಾಯಕ್ಕೂ ಮಣಿಯದೇ ಮೊಟ್ಟೆ ಯೋಜನೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಅಪೌಷ್ಠಿಕತೆ ನಿವಾರಣೆ ಉದ್ದೇಶದಿಂದ ಯಾವುದೇ ಕಾರಣಕ್ಕೂ ಮೊಟ್ಟೆ ವಿತರಣೆ ಕೈಬಿಡಬಾರದು. ಮೊಟ್ಟೆ ಯೋಜನೆ ಬಗ್ಗೆ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Share News

About admin

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *