Breaking News

ಆಂಧ್ರಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 8 ಪ್ರಯಾಣಿಕರು ಸಾವು

ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ( Privet Bus ) ಒಂದು ಸೇತುವೆಯ ಮೇಲಿನಿಂದ ನದಿಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೇರಿ ಸಮೀಪದ ಜಲ್ಲೇರು ಬಳಿಯಲ್ಲಿ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ.

ಇದರಿಂದಾಗಿ ಬಸ್ ನಲ್ಲಿದ್ದಂತ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತ ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ರಕ್ಷಣಾ ಸಿಬ್ಬಂದಿ, ಪ್ರಯಾಣಿಕರನ್ನು ರಕ್ಷಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಬಸ್ ನಲ್ಲಿ ಎಷ್ಟು ಪ್ರಯಾಣಿಕರು ಇದ್ದರು ಎಂಬುದು ಖಚಿತವಾಗಬೇಕಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *