Breaking News

‘ವರುಣ್ ಸಿಂಗ್’ ಸೇವೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ- ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ರಾಷ್ಟ್ರಕ್ಕಾಗಿ ಅವರ ಶ್ರೀಮಂತ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಡಿಸೆಂಬರ್ 8ರಂದು ತಮಿಳುನಾಡಿನ ಊಟಿ ಸಮೀಪ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಹಾಗೂ 12 ಮಂದಿಯಿದ್ದಂತ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡಿತ್ತು.13 ಮಂದಿ ಭೀಕರ ದುರಂತದಲ್ಲಿ ನಿಧನರಾಗಿದ್ದರು. ಈ ಘಟನೆಯಲ್ಲಿ ಅಚ್ಚರಿಯ ರೀತಿಯಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಸುಟ್ಟ ಗಾಯದೊಂದಿಗೆ ಬದುಕುಳಿದಿದ್ದರು. ಅವರನ್ನು ಆರಂಭದಲ್ಲಿ ವೆಲ್ಲಿಂಗ್ಟನ್ ಆನಂತ್ರ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇಂದು ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದಂತ ಗ್ರೂಪ್ ಕ್ಯಾಪ್ಟನ್ ಅಧಿಕಾರಿ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದು, ವರುಣ್ ಸಿಂಗ್ ಅವರ ಸೇವೆಯನ್ನು ಈ ದೇಶ ಎಂದಿಗೂ ಮರೆಯೋದಿಲ್ಲ. ಅವರ ನಿಧನ ನನಗೆ ತುಂಬಾ ದುಃಖ ತಂದಿದೆ ಎಂದು ಹೇಳಿ, ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *