Breaking News

ಕಾರು-ಬೈಕ್ ಡಿಕ್ಕಿ – ಬೈಕ್ ಸವಾರ ಬೀಳುತ್ತಿರುವ ವೀಡಿಯೋ ವೈರಲ್

ಹಾಸನ: ವೇಗವಾಗಿ ಬಂದ ಕಾರು ಹಿಂಬದಿಯಿಂದ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗೆ ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಬಸ್ತಿಹಳ್ಳಿಯ ಮಂಜುನಾಥ್ ಗಾಯಗೊಂಡ ಬೈಕ್ ಸವಾರ. ವೇಗವಾಗಿ ಬರುತ್ತಿದ್ದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿ ರಭಸಕ್ಕೆ ಬೈಕ್ ಸವಾರ, ಬೈಕ್ ಸಮೇತ ಕಾರಿನ ಮೇಲೆ ಜಂಪ್ ಆಗಿ ಬಿದ್ದಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಾಸನದಿಂದ ಮೈಸೂರಿನತ್ತ ಸ್ವಿಫ್ಟ್ ಕಾರು ತೆರಳುತ್ತಿತ್ತು. ಬೈಕ್‌ಗೆ ಡಿಕ್ಕಿ ಹೊಡೆದರೂ ಕಾರನ್ನು ನಿಲ್ಲಿಸದೆ ತಪ್ಪಿಸಿಕೊಂಡು ಹೋಗುವ ವೇಳೆ ಕಾರು ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಾರು ಡಿಕ್ಕಿಯಾದರು ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಡಿಸೆಂಬರ್ 12ರ ಮಧ್ಯಾಹ್ನ 3 ಗಂಟೆಗೆ ಅಪಘಾತ ನಡೆದಿದ್ದು, ಇದೀಗ ಭೀಕರ ಅಪಘಾತದ ದೃಶ್ಯ ವೈರಲ್ ಆಗಿದೆ. ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *