Breaking News

ಅವೈಜ್ಞಾನಿಕ ಹೈವೇ ಕಾಮಗಾರಿ – ಸರಣಿ ಅಪಘಾತ 7 ಮಂದಿಗೆ ಗಾಯ

ಚಿಕ್ಕಬಳ್ಳಾಪುರ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ನಡೆದಿದೆ.

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ವಾಪಸಂದ್ರ ಸೇತುವೆ ಬಳಿ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಗುಂಡಿ ಬಿದ್ದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ತಾತ್ಕಾಲಿಕವಾಗಿ ತೇಪೆ ಹಾಕಲಾಗಿದೆ. ಆದರೆ ತೇಪೆ ಹಾಕಿರುವ ಜಾಗದಲ್ಲಿ ಮತ್ತೆ ಹಳ್ಳ ಬಿದ್ದಿದ್ದು, ಹೈವೇಯಲ್ಲಿ ಅತಿ ವೇಗವಾಗಿ ಬರುವ ವಾಹನಗಳು ಹಳ್ಳದಲ್ಲಿ ಬಿದ್ದು ಜಂಪ್ ಹೊಡೆಯುತ್ತಿದೆ. ಇಂದು ಸಹ ಸ್ಯಾಂಟ್ರೋ ಕಾರೊಂದು ಅತಿ ವೇಗವಾಗಿ ಬಂದಿದ್ದು, ಹಳ್ಳದಲ್ಲಿ ಇಳಿದ ಕೂಡಲೇ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದರುಗಡೆ ಹೋಗುತ್ತಿದ್ದ ಆಟೋ ಹಾಗೂ ಟಾಟಾ ಏಸ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದೆ ಹಾಗಾಗಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *