ದೆಹಲಿ : ಚಲಿಸುತ್ತಿದ್ದ ಆಟೋ ಮೇಲೆ ಕಂಟೇನರ್ ಟ್ರಕ್ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆಯು ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಸಂಭವಿಸಿದೆ. ಇಂದು ಮುಂಜಾನೆ 6:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಕಂಟೇನರ್ ಆಟೋರಿಕ್ಷಾದ ಮೇಲೆ ಬೀಳುತ್ತಿದ್ದಂತೆಯೇ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕಂಟೇನರ್ ಟ್ರಕ್ ಚಲಾಯಿಸುತ್ತಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದುವರೆಗೂ ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪರಾರಿಯಾಗಿರುವ ಆಟೋ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

