ವಿಜಯಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಜಮೀನಿನಲ್ಲಿ ಬೆಂಕಿ ತಗುಲಿ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಕಡಣಿ ಗ್ರಾಮದಲ್ಲಿ ನಡೆದಿದೆ.

ರೈತರಾದ ಪ್ರೇಮಾನಂದ ಗುಗ್ಗವಾಡ ಎಂಬುವವರಿಗೆ ಸೇರಿದ ಜಮೀನು ಬೆಂಕಿಗಾಹುತಿ ಆಗಿದ್ದು , ಲಕ್ಷಾಂತರ ಮೌಲ್ಯದ ಕಬ್ಬು ವಿದ್ಯುತ್ ಸ್ಪರ್ಶದಿಂದ ಹಾನಿಯಾಗಿದೆ. ಮಾಹಿತಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ, ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

