Breaking News

ಶಿವಸೇನೆ, ಎಂಇಎಸ್ ಹೈಡ್ರಾಮಾ.. ಆರಕ್ಕೂ ಅಧಿಕ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಪೊಲೀಸರು ನಿಷೇಧಾಜ್ಞೆ ಹೇರಿ, ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿದ್ದಾರೆ. ಈ ನಡುವೆ ಬೆಳಗಾವಿಯ ಶಿವಾಜಿ ಉದ್ಯಾನವನದ ಬಳಿ ಶಿವಸೇನೆ, ಎಂಇಎಸ್ ಮುಖಂಡರು ಹೈಡ್ರಾಮಾ ನಡೆಸಿದ್ದರಿಂದ ಆರಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಂಇಎಸ್ ಮುಖಂಡ ಶಿವಾಜಿ ಸುಂಟ್ಕರ್, ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳಕರ ಸೇರಿ ಹಲವರು ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಇಂದು ನಿಷೇಧಾಜ್ಞೆ ಜಾರಿ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಪೊಲೀಸರು ಹೇಳಿದರೂ ಕೂಡ ನಾವು ಒಳಗೆ ಹೋಗುತ್ತೇವೆ. ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದರು. ಈ ವೇಳೆ ಶಿವಸೇನೆ, ಎಂಇಎಸ್ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗುಂಪು ಗುಂಪಾಗಿ ಕೂಡಿಕೊಂಡು ರಸ್ತೆಯಲ್ಲಿ ಪ್ರತಿಭಟನೆ‌ಗೆ ಮುಂದಾಗಿದ್ದಾರೆ. ಹಾಗಾಗಿ ಆರಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *