Breaking News

ದೇಶದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಡೋಸ್ ವ್ಯರ್ಥ

ನವದೆಹಲಿ: ಭಾರತದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ವ್ಯರ್ಥವಾಗಿದೆ. ಅದರಲ್ಲಿ ಅರ್ಧದಷ್ಟು ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳೆಂದು ಎಂದು ವರದಿಯಾಗಿದೆ.

ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು 16.48 ಲಕ್ಷ, ಉತ್ತರ ಪ್ರದೇಶದಲ್ಲಿ 12.60 ಲಕ್ಷ ಮತ್ತು ರಾಜಸ್ಥಾನದಲ್ಲಿ 6.86 ಲಕ್ಷ ಕೋವಿಡ್ ಡೋಸ್ ವ್ಯರ್ಥವಾಗಿದೆ. ಈ ಮೂರು ರಾಜ್ಯಗಳನ್ನು ತೆಗೆದುಕೊಂಡರೆ ಒಟ್ಟಾರೆಯಾಗಿ 36 ಲಕ್ಷದಷ್ಟು ನಷ್ಟವಾಗಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್, ಕಳೆದ 11 ತಿಂಗಳಲ್ಲಿ ಕೊರಾನಾ ಡೋಸ್ ವ್ಯರ್ಥ ಮಾಡಿರುವ ರಾಜ್ಯಗಳ ಪಟ್ಟಿಯನ್ನು ಪ್ರಸ್ತುತಪಡಿಸಿದ್ದು, ಒಂದು ಲಕ್ಷಕ್ಕೂ ಅಧಿಕ ಲಸಿಕೆಯನ್ನು ಹಾಳುಮಾಡಿರುವ ರಾಜ್ಯಗಳ ಪಟ್ಟಿಯನ್ನು ನೀಡಿದ್ದಾರೆ.

ಸಚಿವರು ನೀಡಿರುವ ಹೇಳಿಕೆಯ ಪ್ರಕಾರ ಕರ್ನಾಟಕದಲ್ಲಿ 1.27ಲಕ್ಷ ಕೋವಿಡ್ ಲಸಿಕೆ ವ್ಯರ್ಥವಾಗಿದೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *