ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್, ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ನಂತರ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಪರಿಣಾಮ, ಚಿಕಿತ್ಸೆ ಫಲಿಸದೇ ಕಿರಣ ಪಾಟೀಲ್ ಸಾವಿಗೀಡಾಗಿದ್ದಾರೆ.
ಕಿರಣ ಪಾಟೀಲ ಅವರಿಗೆ ಫೀಡ್ಸ್ ಬಂದ ಕಾರಣದಿಂದಲೇ ಹೀಗಾಗಿತ್ತು ಹೇಳಲಾಗಿದ್ದು. ತದನಂತರ ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

