ಬೆಳಗಾವಿ: ಕೆಲವರು ಸಮಾಜದ ಹೆಸರು ಕೆಡಿಸುತ್ತಿದ್ದಾರೆ. ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು. ಕೆಲವರು ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾ ಪುರುಷರ ಪ್ರತಿಮೆಗೆ ಕಪ್ಪುಮಸಿ, ಪ್ರತಿಮೆ ಕೆಡವಿದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಅದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಬೇಳೆ ಬೇಯಿಸಲು ಈ ರೀತಿ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದರು.
ಅವರು ನಮ್ಮ ಹೆಮ್ಮೆಯ ಮಹಾಪುರುಷರು. ಯಾರು ತಪ್ಪಿತಸ್ಥರೋ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಕುರುಬ ಮತ್ತು ಮರಾಠ ಸಮುದಾಯದ ನಾಯಕರ ಜೊತೆ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇನೆ. ಎಂಇಎಸ್ ನಿಷೇಧ ಬಗ್ಗೆ ಚರ್ಚೆ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು.
ಎಂಇಎಸ್ ಪುಂಡಾಟಿಕೆ ಬಗ್ಗೆ ಬೆಳಗಾವಿ ಮುಖಂಡರ ಮೌನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಯಾರನ್ನೂ ಓಲೈಕೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಯಾರೂ ತಪ್ಪು ಮಾಡಿದ್ದಾರೆ ಅವರು ತಪ್ಪು ಮಾಡಿದ್ದಾರೆ ಎಂದು ಹೇಳುವ ಧೈರ್ಯ ನನಗೆ ಇದೆ ಎಂದರು
bigtvnews | Hubli Dharwad News | Kannada News | Karnataka News Hubli News | News In Hubli | Local news

