Breaking News

ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಬೇಕು – ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯ

ಬೆಂಗಳೂರು : ಮಹಾರಾಷ್ಟ್ರದ ಎಂಇಎಸ್ ಸಂಘಟನೆಯನ್ನು ರದ್ದು ಮಾಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಂಡಳಿ ಅಧ್ಯಕ್ಷ ಜಯರಾಜ್, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ, ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡನೀಯ.

ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಹೇಳಿದರು. ಇನ್ನೂ ನನ್ನ ಚಿಕ್ಕವಯಸ್ಸಿನಿಂದಲೂ ಎಂಇಎಸ್ ಪುಂಡಾಟಿಕೆಯನ್ನು ನೋಡುತ್ತಿದ್ದೇನೆ. ಇವರ ರಾಜ್ಯವಿರೋಧಿ ಧೋರಣೆಗಳನ್ನು ಸಹಿಸಲು ಸಾಧ್ಯವಿಲ್ಲ. ತುರ್ತಾಗಿ ಸರ್ಕಾರ ಎಚ್ಚೆತ್ತುಕೊಂಡು ಕಠಿಣವಾಗಿ ವರ್ತಿಸಬೇಕು ಹಾಗೂ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿದ್ದಾರೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *