Breaking News

ಟ್ರ್ಯಾಕ್ಟರ್‌ ಪಲ್ಟಿ : ಸ್ಥಳದಲ್ಲಿಯೇ ಸಾವನ್ನಪ್ಪಿದ ಇಬ್ಬರು ಮಹಿಳೆಯರು..!

ಯಾದಗಿರಿ : ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ಸಮೀಪದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.

ಪರ್ವಿನ್‌ ಭಾನು (32), ಮೋನಮ್ಮ (28) ಮೃತ ದುರ್ದೈವಿಗಳಾಗಿದ್ದಾರೆ. ಬೆಳಿಗ್ಗೆ ಹತ್ತಿ ಬಿಡಿಸಿ ಮನೆಗೆ ಹಿಂತಿರುಗುವ ವೇಳೆ ಕೆರೆಯ ತಿರುವಿನಲ್ಲಿ ವೇಗವಾಗಿ ಚಾಲನೆ ಮಾಡಿದ್ದರಿಂದ ಚಾಲಕನ ನಿಯಂತ್ರಣಕ್ಕೆ ಸಿಗದೇ ಟ್ರಾಕ್ಟರ್ ಪಲ್ಟಿಯಾಗಿದೆ.‌ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತವಾದ ತಕ್ಷಣ ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.
ಇನ್ನೂ ಟ್ರಾಕ್ಟರ್ ನಲ್ಲಿ 15 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *