Breaking News

ಡಿಸೆಂಬರ್‌ 31 ಕ್ಕೆ ಕರ್ನಾಟಕ ಬಂದ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು. ಡಿಸೆಂಬರ್ 31 ರ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31 ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಬಂದ್ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ನಡೆಯಲಿದೆ.

ಏನಿರಲಿದೆ?

ಡಿಸೆಂಬರ್ 31 ರಂದು ಆಸ್ಪತ್ರೆ, ಪೆಟ್ರೋಲ್ ಬಂಕ್, ಬ್ಯಾಂಕ್, ಸಾರಿಗೆ, ಮೆಡಿಕಲ್ ಸೇವೆ ಇರಲಿದೆ.

ಏನಿರಲ್ಲ?

ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದೆ. ಈ ನಿಟ್ಟಿಯಲ್ಲಿ ಯವುದೇ ವಾಹನ ಸಂಚಾರ ನಡೆಸಲು ಅವಕಾಶ ವಿರಲ್ಲ. ಹೀಗಾಗಿ ಆಟೋ, ಟ್ಯಾಕ್ಸಿ ಸಂಚಾರ, ಬೀದಿ ಬದಿ ಅಂಗಡಿ, ಮದ್ಯ ಮಾರಾಟ, ಹೋಟೆಲ್ ಸೇರಿದಂತೆ ಇತರ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *