Breaking News

ದೈಹಿಕ ಸಂಬಂಧದ ನಂತರ ಮದುವೆಯಾಗಲು ನಿರಾಕರಿಸುವುದು ಮೋಸವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಪರಸ್ಪರ ಒಪ್ಪಿಗೆಯೊಂದಿಗೆ ದೀರ್ಘಾವಧಿಯವರೆಗೆ ದೈಹಿಕ ಸಂಬಂಧಗಳನ್ನು ಉಳಿಸಿಕೊಂಡ ನಂತರ ಮದುವೆಯಾಗಲು ನಿರಾಕರಿಸುವುದನ್ನು ವಂಚನೆ ಎಂದು ಕರೆಯಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ಸಂತ್ರಸ್ತೆ ಪಾಲ್ಘರ್ ನಿವಾಸಿಯೊಬ್ಬರು ಮೂರು ವರ್ಷಗಳಕಾಲ ಮದುವೆಯ ನೆಪದಲ್ಲಿ ದೈಹಿಕ ಸಂಬಂಧವನ್ನು ಹೊಂದಿದ್ದರು ಮದುವೆ ಮಾಡಿಕೊಳ್ಳುವಂತೆ ಕೇಳಿದ್ದಾಗ ಯುವಕ ನಿರಾಕರಿಸಿದ್ದಾನೆ ಅಂತ ಯುವತಿ ನ್ಯಾಯಾಕ್ಕಾಗಿ ಮನವಿ ಸಲ್ಲಿಸಿದ್ದಳು.

ಇದೇ ವೇಳೇ ಆರೋಪಿಯ ಮೇಲೆ ಅತ್ಯಾಚಾರ ಮತ್ತು ವಂಚನೆಗಾಗಿ ಸೆಕ್ಷನ್ 376 ಮತ್ತು 417 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು,

ಫೆಬ್ರವರಿ 1999 ರಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ಯುವಕನನ್ನು ವಂಚನೆಗಾಗಿ ದೋಷಿ ಎಂದು ಘೋಷಿಸಿದರು ಆದರೆ ಅತ್ಯಾಚಾರ ಆರೋಪದಿಂದ ಅವರನ್ನು ಖುಲಾಸೆಗೊಳಿಸಿದರು. ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಯಿತು. ಈ ತೀರ್ಪಿನ ವಿರುದ್ಧ ಕಾಶಿನಾಥ್ ಬಾಂಬೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ, ಯುವತಿಯ ಹೇಳಿಕೆಯಲ್ಲಿ ತಾನು ಯಾವುದೇ ರೀತಿಯಲ್ಲಿ ಮೋಸ ಹೋಗಿರುವುದು ಸಾಬೀತಾಗಿಲ್ಲ. ಪರಸ್ಪರ ಒಪ್ಪಿಗೆ ಮೇರೆಗೆ ದೈಹಿಕ ಸಂಬಂಧ ಇರೋದನ್ನು ಒಪ್ಪಿಕೊಂಡಿದ್ದಾರೆ ಅಂತ ನ್ಯಾಯಾಧೀಶರು ಹೇಳಿದ್ದಾರೆ.

ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತು ಸಾಕ್ಷಿಗಳು ಮತ್ತು ವಾದಗಳನ್ನು ಆಲಿಸಿದ ನಂತರ, ಪ್ರಕರಣದ ಆರೋಪಿಗಳು ಸುಳ್ಳು ಮಾಹಿತಿ ನೀಡುವ ಮೂಲಕ ಅಥವಾ ವಂಚನೆ ಮಾಡುವ ಮೂಲಕ ಲೈಂಗಿಕ ಸಂಭೋಗವನ್ನು ಹೊಂದಿದ್ದರು ಎಂಬುದು ನಿರ್ಣಾಯಕವಾಗಿ ಸಾಬೀತಾಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಆದ್ದರಿಂದಲೇ ಇಷ್ಟು ದೀರ್ಘ ಕಾಲದ ಸಂಬಂಧದಲ್ಲಿದ್ದ ನಂತರ ಮದುವೆಯಾಗಲು ನಿರಾಕರಿಸುವುದನ್ನು ವಂಚನೆ ಎಂದು ಹೇಳಲಾಗದು ಎಂದು ನ್ಯಾಯಾಲಯ ಹೇಳಿದೆ.ಇಂತಹ ಪ್ರಕರಣಗಳಲ್ಲಿ ಆರೋಪಿಗಳು ಸುಳ್ಳು ಮಾಹಿತಿ ನೀಡಿ ಮಹಿಳೆಗೆ ಆಮಿಷ ಒಡ್ಡಿದ್ದಾರೆ ಅಥವಾ ಮದುವೆ ಭರವಸೆ ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸುವುದು ಅಗತ್ಯ ಎಂದು ಹೈಕೋರ್ಟ್ ತನ್ನ ತೀರ್ಪು ನೀಡಿದೆ. ಸುಳ್ಳು ಮಾಹಿತಿಯ ಆಧಾರದ ಮೇಲೆ ಭರವಸೆಗಳನ್ನು ನೀಡಿ ನಂತರ ಈಡೇರಿಸದಿದ್ದರೆ ಅದನ್ನು ವಂಚನೆ ಎಂದು ಕರೆಯಬಹುದು ಎಂದು ನ್ಯಾಯಾಲಯ ಹೇಳಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *