Breaking News

ಬಸವಣ್ಣ- ಅಂಬೇಡ್ಕರ್ ಸಿದ್ಧಾಂತಗಳಿಗೆ ಸರ್ಕಾರ ಅಪಚಾರ : ಡಿಕೆ ಶಿವಕುಮಾರ

ಬೆಳಗಾವಿ:– ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಿದ್ಧಾಂತಗಳಿಗೆ ಅಪಚಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12ನೆ ಶತಮಾನದಲ್ಲಿ ಎಲ್ಲ ಸಮುದಾಯಗಳಿಗೂ ಲಿಂಗಧಾರಣೆ ಮಾಡುವ ಮೂಲಕ ಬಸವಣ್ಣ ಸಮಾನತೆಯ ತತ್ವ ಸಾರಿದ್ದರು. ಅಂಬೇಡ್ಕರ್ ಅವರು ಬೌದ್ಧ ಧರ್ಮದ ಬಗ್ಗೆ ಪ್ರಚಾರ ಮಾಡಿದ್ದರು. ಆದರೆ, ಬಿಜೆಪಿಯವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕ್ರೈಸ್ತರು, ಮುಸಲ್ಮಾನರನ್ನು ಬೆದರಿಸುವ ಉದ್ದೇಶದಿಂದ ಈ ಕಾಯ್ದೆ ಮಂಡಿಸಲಾಗಿದೆ.

ಇದರಿಂದ ಹಲವು ಮಠಾೀಧಿಶರು ಕೂಡ ಆತಂಕಕ್ಕೆ ಒಳಗಾಗಿದ್ದಾರೆ. ನಾವು ಕೂಡ ಲಿಂಗಧಾರಣೆ ಮಾಡಿ ಧರ್ಮ ಪ್ರಚಾರ ಮಾಡುತ್ತೇವೆ. ಈ ಕಾನೂನು ಮುಂದಿಟ್ಟುಕೊಂಡು ನಾಳೆ ನಮ್ಮನ್ನೂ ಎದುರಿಸಬಹುದು ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಕ್ರೈಸ್ತ, ಮುಸಲ್ಮಾನ್ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಲು ಬಿಜೆಪಿಯವರು ಕೇಂದ್ರ ಸಚಿವರು, ರಾಜ್ಯ ಸಚಿವರುಗಳಿಂದ ಶಿಫಾರಸು ಪತ್ರಗಳನ್ನು ಹಿಡಿದು ನಿಲ್ಲುತ್ತಾರೆ. ಎಲ್ಲರಿಗೂ ಸೆಂಟ್‍ಜಾನ್, ಕ್ರೈಸ್ಟ್ ಯೂನಿವರ್ಸಿಟಿ, ಬಾಲ್ಡ್ವಿನ್ ಶಿಕ್ಷಣ ಸಂಸ್ಥೆಗಳೇ ಬೇಕು. ಅಲ್ಲಿ ಸೀಟು ಕೊಡದೆ ಇದ್ದಾಗ ಹೆದರಿಸಲು ಈ ಕಾನೂನು ತಂದಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ದಲಿತರು ಬೌದ್ಧಧರ್ಮ ಪ್ರಚಾರ ಮಾಡುತ್ತಾರೆ. ರಾಜ್ಯ ಸರ್ಕಾರ ವಿಧ್ವಂಸಕಾರಿ ಕಾನೂನು ಜಾರಿಗೆ ತರುವ ಮೂಲಕ ಸಾಮರಸ್ಯ ಹಾಳು ಮಾಡಲು ಹೊರಟಿದೆ. ಧರ್ಮಸ್ಥಳದ ಧರ್ಮಾಕಾರಿ ವೀರೇಂದ್ರ ಹೆಗ್ಗಡೆ ಅವರು ಜೈನಧರ್ಮದವರು. ನಮ್ಮಲ್ಲಿ ಧರ್ಮ ಸಾಮರಸ್ಯ ಉತ್ತಮವಾಗಿದೆ. ಅನಗತ್ಯವಾಗಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತಂದಿದೆ ಎಂದು ಕಿಡಿಕಾರಿದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *