Breaking News

ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ ಬಾಗಿಲು ಮುಚ್ಚಿ ನವವಧುವಿನ ಕೊಲೆ?

ಹಾಸನ: ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ.

ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನಮ್ಮ ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ. ಅಳಿಯ ಹಾಗೂ ಅವರ ಮನೆಯವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *