Breaking News

ಬೆಂಗಳೂರಲ್ಲಿ 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ.!

ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರ್‍ರಾಜ್ಯ ಡ್ರಗ್ಸ್ ಪೆಡ್ಲರ್ಸ್ ಗಳನ್ನು ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿ 5 ಕೋಟಿ ರೂ. ಮೌಲ್ಯದ 5ಕೆಜಿ ಹ್ಯಾಸ್ ಹಾಯಿಲ್ ಮತ್ತು ಒಂದು ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಪ್ರಕಾಶ್ ಮತ್ತು ದಾರಾಸ್ವಾಮಿ ಬಂಧಿತ ಆರೋಪಿಗಳು.

ಮಾದಕ ವಸ್ತು ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಾದ ಕಮಲ್‍ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಮುರುಗನ್ ಅವರು ಸೂಚನೆ ನೀಡಿದ್ದರು. ಅದರಂತೆ ಮೈಕೋಲೇಔಟ್ ಠಾಣೆಯ ಇನ್ಸ್‍ಪೆಕ್ಟರ್ ಅವರನ್ನೊಳಗೊಂಡ ಒಂದು ತಂಡ ರಚಿಸಲಾಗಿತ್ತು.

ಈ ತಂಡಕ್ಕೆ ದೊರೆತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾಗಿ ಎಸ್‍ಎನ್‍ಎನ್ ಅಪಾರ್ಟ್‍ಮೆಂಟ್ ರಸ್ತೆಯ ಹತ್ತಿರ ಮಾದಕ ವಸ್ತು ಗಾಂಜಾ ಮತ್ತು ಹ್ಯಾಸ್ ಹಾಯಿಲ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್‍ಪೆಡ್ಲರ್‍ಗಳನ್ನು ಬಂಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳು ಹ್ಯಾಸ್ ಹಾಯಿಲ್ ಹಾಗೂ ಗಾಂಜಾವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾಫ್ಟ್‍ವೇರ್ ಕಂಪೆನಿಗಳ ನೌಕರರಿಗೆ ಮಾರಾಟ ಮಾಡಿ ಬಂದ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದರು ಎಂದು ವಿಚಾರಣೆ ಸಂದರ್ಭದಲ್ಲಿ ತಿಳಿದು ಬಂದಿದೆ.

ಇನ್ಸ್‍ಪೆಕ್ಟರ್ ಚೌದರಿ, ಪಿಎಸ್‍ಐ ರಾಮಕೃಷ್ಣ ಚಿನ್ಮಾದ್ಲಿ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು. ಈ ಯಶಸ್ವಿ ಕಾರ್ಯಾಚರಣೆಯನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.ಹೊಸ ವರ್ಷಾಚರಣೆ ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾದಕ ವಸ್ತುಗಳ ಮಾರಾಟ ಜಾಲದ ಮೇಲೆ ನಿಗಾ ಇಟ್ಟಿದ್ದು, ದಾಳಿ ಮಾಡುತ್ತಿದ್ದಾರೆ.

ನಿನ್ನೆ ಕೆಜಿಹಳ್ಳಿ ಠಾಣೆ ಪೊಲೀಸರು ಮಣಿಪುರ ಮೂಲದ ಇಬ್ಬರನ್ನು ಬಂಸಿ ಗೋಹಿಟ್ಟಿನ ಬಾಕ್ಸ್‍ನಲ್ಲಿ ಸಾಗಾಣೆ ಮಾಡುತ್ತಿದ್ದ ಹೆರಾಯಿನ್‍ನನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *