Breaking News

ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು ‘ಮತಾಂತರ’ ಗುಮ್ಮವನ್ನು ತಂದು ನಿಲ್ಲಿಸಿದೆ-ಎಚ್.ಡಿ. ಕುಮಾರಸ್ವಾಮಿ

ಬೆಳಗಾವಿ: ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ,

ಟ್ವೀಟ್‍ನಲ್ಲಿ ಏನಿದೆ?
ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು ‘ಮತಾಂತರ’ ಗುಮ್ಮವನ್ನು ತಂದು ನಿಲ್ಲಿಸಿದೆ. ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *