Breaking News

ಸಾರಿಗೆ ಸಂಸ್ಥೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಧಾರವಾಡ: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಸಮೀಪ ನಡೆದಿದೆ.

ಮುಳಮುತ್ತಲ ಗ್ರಾಮದ ಚನ್ನಪ್ಪ ಬಸಪ್ಪ ಬನವಣ್ಣವರ (21) ಎಂಬ ಯುವಕನೇ ಸಾವನ್ನಪ್ಪಿದವನು. ಈತ ಬೈಕ್ ತೆಗೆದುಕೊಂಡು ಧಾರವಾಡ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಧಾರವಾಡ ಕಡೆಯಿಂದ ಯಾದವಾಡ ಕಡೆಗೆ ಬರುತ್ತಿದ್ದ ಬಸ್ಸು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯುವಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *