Breaking News

ರಾಮಮಂದಿರ ಟ್ರಸ್ಟ್ ಭೂ ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿ – ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ

ನವದೆಹಲಿ : ಮರ್ಯಾದ ಪುರುಷೋತ್ತಮ ಶ್ರೀರಾಮ ಹೆಸರಿನಲ್ಲಿ ಅಯೋಧ್ಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಬಾರಿ ಬೆಲೆಗೆ ಶ್ರೀರಾಮ ಮಂದಿರ ನಿರ್ಮಾಣ ಟ್ರಸ್ಟ್ ಭೂಮಿ ಖರೀದಿಸುತ್ತಿದೆ ಎಂದು ಹೇಳಿದ್ದಾರೆ.ಶ್ರೀರಾಮ ಮಂದಿರ ನಿರ್ಮಾಣ ಘೋಷಣೆ ಬಳಿಕ ದೇವಸ್ಥಾನದ ಸುತ್ತಲಿನ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಬಿಜೆಪಿ ನಾಯಕರು, ಅಧಿಕಾರಿಗಳು ಟ್ರಸ್ಟ್ ಬಳಸಿಕೊಂಡು ಉದ್ದೇಶಪೂರ್ವಕವಾಗಿ ಭಾರೀ ಬೆಲೆಗೆ ಭೂಮಿ ಮಾರಾಟ ಮಾಡುತ್ತಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದರು.

ರಾಮ ಮಂದಿರ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಭೂಮಿಯನ್ನು ಬಿಜೆಪಿ ನಾಯಕರು ಖರೀದಿ ಮಾಡಿದ್ದಾರೆ. ಹೀಗೆ ಕಡಿಮೆ ಬೆಲೆಯಲ್ಲಿ ಕೊಂಡುಕೊಂಡ ಭೂಮಿಯನ್ನು ರಾಮ ಮಂದಿರ ನಿರ್ಮಾಣ ಟ್ರಸ್ಟ್ ದೇಣಿಗೆಯ ಹಣದಿಂದ ದುಬಾರಿ ಬೆಲೆಗೆ ಕೊಂಡುಕೊಂಡಿದೆ. ಈ ಮಾರಾಟ ಪ್ರಕ್ರಿಯೆಗಳೂ ಸಹ ಕೆಲವೇ ನಿಮಿಷಗಳ ಅಂತರದಲ್ಲಿ ನಡೆದಿದ್ದು ಭಾರೀ ಭ್ರಷ್ಟಾಚಾರ ನಡೆದಿರುವ ಸುಳಿವು ನೀಡುತ್ತಿದೆ ಎಂದು ದಾಖಲೆಗಳ ಸಮೇತ ಗಂಭೀರ ಆರೋಪ ಮಾಡಿದರು..

ಮಂದಿರದ ಆವರಣದ ಸುತ್ತ ನಡೆದಿರುವ ಅಕ್ರಮ ಭೂ ವ್ಯವಹಾರದಲ್ಲಿ ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಭಾಗಿಯಾಗಿದ್ದಾರೆ. ಇವರ ಸಹಾಯದಿಂದ ಸುತ್ತಲಿನ ಮಾರಾಟವಾಗದ ದಲಿತರ ಭೂಮಿಯನ್ನು ಕಬಳಿಸಲಾಗಿದೆ. ಒಂದೇ ಜಮೀನಿನ ಎರಡು ಭಾಗಗಳು ಕೆಲವೇ ನಿಮಿಷಗಳಲ್ಲಿ ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿವೆ. ಸೇಲ್ ಡೀಡ್‍ನಲ್ಲಿ ಆರ್‌ಎಸ್‌ಎಸ್‌ ಮುಖಂಡ ಮತ್ತು ರಾಮಮಂದಿರದ ಟ್ರಸ್ಟಿ ಅನಿಲ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಸಾಕ್ಷಿಗಳ ಸಹಿ ಇದೆ ಎಂದು ಹೇಳಿದರು.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *