ಧಾರವಾಡ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಧಾರವಾಡದ ನಗರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ವಿನಾಯಕ ಚಿನಿವಾಲರ (36) ಎಂಬ ವ್ಯಕ್ತಿಯೇ ಸಜೀವ ದಹನಗೊಂಡವನು. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ವಿನಾಯಕ ದೀಪ ಹಚ್ಚಲು ಹೋಗಿ ಯಡವಟ್ಟು ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿನಾಯಕ ವಿಪರೀತ ಮದ್ಯವೆಸನಿಯಾಗಿದ್ದ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೋ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೋ ಎಂಬುದರ ಬಗ್ಗೆ ತನಿಖೆಯಿಂದ ಗೊತ್ತಾಗಬೇಕಿದೆ.

ಮನೆಯಲ್ಲಿ ಕರೆಂಟ್ ಇಲ್ಲದ್ದರಿಂದ ವಿನಾಯಕನ ತಾಯಿ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

