Breaking News

ಕೋವಿಡ್ ಪ್ರಕರಣಗಳ ಹೆಚ್ಚಳ: ದೆಹಲಿಯಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಮತ್ತು ಓಮೈಕ್ರಾನ್ ಆತಂಕದ ನಡುವೆ ದೆಹಲಿಯಲ್ಲಿ ಇಂದಿನಿಂದ (ಡಿ.27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫ್ಯೂ ವಿಧಿಸಿ ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಆದೇಶಿಸಿದೆ.

ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಅಧಿಕ 142 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ನ್ಯಾಯಾಂಗದ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಗರ್ಭಿಣಿಯರು ಮತ್ತು ರೋಗಿಗಳು, ಅಗತ್ಯ ವಸ್ತುಗಳ ಖರೀದಿಗೆ ಕಾಲ್ನಡಿಗೆಯಲ್ಲಿ ತೆರಳುವ ಜನರು, ಮಾಧ್ಯಮದವರು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಿಗೆ ತೆರಳುವ ಮತ್ತು ಬರುವವರಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ.

ರಾತ್ರಿ ಕರ್ಫ್ಯೂ ಅವಧಿಯಲ್ಲಿ ವಿನಾಯಿತಿ ಇರುವ ಜನರಿಗೆ ಮಾತ್ರ ಮೆಟ್ರೊ ರೈಲು ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ ಅವಕಾಶವಿದೆ ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಿದೆ.

ದೆಹಲಿಯಲ್ಲಿ ಭಾನುವಾರ ಹೊಸದಾಗಿ 290 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ 0.55ರಷ್ಟಿದೆ. ಮುಂದಿನ ಎರಡು ದಿನಗಳಲ್ಲಿ ಪಾಸಿಟಿವಿಟಿ ದರವು ಶೇ 0.5ರಷ್ಟಿದ್ದರೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗುತ್ತದೆ ಎಂದು ಗ್ರೇಡೆಡ್ ರೆಸ್ಪಾನ್ಸ್ ಆಯಕ್ಷನ್ ಪ್ಲಾನ್ (ಜಿಆರ್‌ಎಪಿ) ತಿಳಿಸಿದೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *