ಬೆಂಗಳೂರು: ಚಂದನವನದ ಸಿಂಪಲ್ ಬ್ಯೂಟಿ ಶ್ವೇತಾ ಶ್ರೀವಾತ್ಸವ್ ಕ್ರಿಸ್‍ಮಸ್ ದಿನ ಬಹಳ ಅರ್ಥ ಪೂರ್ಣವಾಗಿ ಕಳೆದಿದ್ದು, ಈ ಕುರಿತು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಶ್ವೇತಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದು, ಅವರು ಮಾಡುವ ವರ್ಕೌಟ್ ಮತ್ತು ದಿನನಿತ್ಯದ ವಿಶೇಷ ಭಾಗವನ್ನು ಫೋಟೋ ಅಥವಾ ವೀಡಿಯೋ ಮೂಲಕ ಅಭಿಮಾನಿಗಳಿಗೆ ಹಂಚಿಕೊಳ್ಳುತ್ತಿರುತ್ತಾರೆ. ಅದರಂತೆ ಇಂದು ಅವರು ವಿಶೇಷ ವೀಡಿಯೋವನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದು, ಕ್ರಿಸ್ಮಸ್ ಸಮಯವನ್ನು ನಾನು ಚೆನ್ನಾಗಿ ಕಳೆದಿದ್ದೇನೆ. ಈ ದಿನ ನಾವು ಬಡ ಮಕ್ಕಳೊಂದಿಗೆ ಸಮಯ ಕಳೆದಿದ್ದೇವೆ. ಸುಂದರ ಹೃದಯಗಳ ಜೊತೆ ಈ ದಿನ ಸುಂದರವಾಗಿತ್ತು ಎಂದು ಬರೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

