Breaking News

ಶಿವಮೊಗ್ಗ: ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಒಂದೇ ಕುಟುಂಬದ 9 ಮಂದಿ

ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು.

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ.

40 ವರ್ಷಗಳ ಹಿಂದೆ ಮತಾಂತರ

ಜಯಶೀಲನ್ ಅವರ ತಂದೆ ಏಳುಮಲೈ ಎನ್ನುವವರು ಸುಮಾರು 40 ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಆದರೆ, ಕುಟುಂಬದವರಾರೂ ಚರ್ಚ್‌ಗೆ ಹೋಗುತ್ತಿರಲಿಲ್ಲ. ಕ್ರೈಸ್ತ ಧರ್ಮದ ಪ್ರಾರ್ಥನೆಗಳನ್ನು ಮಾಡುತ್ತಿರಲಿಲ್ಲ. ಬದಲಿಗೆ ಹಿಂದೂ ಧರ್ಮದ ಆಚರಣೆಗಳನ್ನೇ ಪಾಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *