Breaking News

ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ-ಈಶ್ವರಪ್ಪ

ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು ಎಂಬುವುದು ರಾಜಕೀಯದಲ್ಲಿ ಇರುವವರಿಗೆ ಗೊತ್ತು ಎಂದರು.

ಈಗಾಗಲೇ ಸರ್ಕಾರದಿಂದ ಎಂಇಎಸ್ ಪುಂಡರಿಗೆ ಕಠಿಣ ಶಿಕ್ಷೆ ನೀಡಲು ತಿಳಿಸಲಾಗಿದೆ. ಬಂದ್ ಕರೆಗೆ ಮಿಶ್ರ ಪ್ರಕ್ರಿಯೆ ವ್ಯಕ್ತವಾಗುತ್ತಿದ್ದು, ಬಂದ್ ಮಾಡುವುದು ಈ ಪರಿಸ್ಥಿತಿಯಲ್ಲಿ ಒಳ್ಳೆಯದಲ್ಲ. ಎಂಇಎಸ್ ಧೋರಣೆ ಬಗ್ಗೆ ಮಾಹಿತಿ ಕಲೆಹಾಕಿ ಕೇಂದ್ರಕ್ಕೆ ನೀಡಲಾಗಿದ್ದು,ಅವರು ಕ್ರಮಕೈಗೊಳ್ಳುತ್ತಾರೆ ಎಂದರು.

ರಾಜ್ಯ ಅಧ್ಯಕ್ಷರು ಹಿಂದೂಳಿದ ವರ್ಗದ ಸಮಾಜದ ಜವಾಬ್ದಾರಿ ನನಗೆ ನೀಡಿದ್ದಾರೆ. ಆದರಿಂದ ಶಿವಮೊಗ್ಗದಲ್ಲಿ ಜ. 5 ರಂದು ರಾಜ್ಯ ಕಾರ್ಯಕಾರಿ ಸಮಿತಿಯ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *