Breaking News

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಬಿದ್ದ ಎಂಬಿಬಿಎಸ್‌ ವಿದ್ಯಾರ್ಥಿ

ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ತಾನು ವಾಸವಿದ್ದ ಹಾಸ್ಟೆಲ್​​ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಿಮ್ಸ್ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಪುನೀತ್​​​ ಎಂಬ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಕಿಮ್ಸ್ ಆವರಣದಲ್ಲಿನ ಆನಂದ ಹಾಸ್ಟೆಲ್​​​ನ ಎರಡನೆಯ ಮಹಡಿಯಿಂದ ಬಿದ್ದಿದ್ದಾನೆ.ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸುವ ಸಲುವಾಗಿ ವೈದ್ಯರು ಸಮಾಲೋಚನೆ ನಡೆಸುತ್ತಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *