ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು.

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನೆಡೆಸಿದರು.
ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನೆಡೆಸಿದ ಕಾರ್ಯಕರ್ತರು ರಾಜ್ಯದ ಶಾಸಕರು ಹಾಗೂ ಸಂಸದರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಸಂಸದರು ಹಾಗೂ ಬೆಳಗಾವಿ ಶಾಸಕರನ್ನು ಸವಾಲ್ ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರದ ಅಭಯ್ ಪಾಟೀಲ್,ಲಕ್ಷ್ಮೀ ಹೆಬ್ಬಾಳ್ಕರ,ರಮೇಶ ಜಾರಕಿಹೊಳಿ,ಸೇರಿದಂತೆ ಶಶಿಕಲಾ ಜೊಲ್ಲೆಯನ್ನು ಕಾರ್ಯಕರ್ತರು ಹರಾಜು ಹಾಕಿದರು. ರಾಜ್ಯದ ಶಾಸಕರು, ಸಂಸದರು ಎಂಇಎಸ್ ಪರವಾಗಿದ್ದಾರೆಂದು ಕಿಡಿ ಕಾರಿದರು.ಕೂಡಲೇ ಎಮ್ ಇಎಸ್ ಸಂಘಟನೆಯನ್ನು ಬ್ಯಾನ್ ಮಾಡುಬೇಕೆಂದು ಒತ್ತಾಯಿಸಿ ಪ್ರತಿಭಟನೆ ನೆಡೆಸಿದರು..
bigtvnews | Hubli Dharwad News | Kannada News | Karnataka News Hubli News | News In Hubli | Local news

