ಬೆಂಗಳೂರು: ಕರ್ನಾಟಕ ರಾಜ್ಯ ಬಂದ್‍ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್‍ಹಾಲ್‍ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು.
ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್‍ಗೌಡ ಸೇರಿದಂತೆ ಹಲವು ಮುಖಂಡರುಗಳ ನೇತೃತ್ವದಲ್ಲಿ ಟೌನ್‍ಹಾಲ್‍ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಪುಂಡಾಟಿಕೆ ನಡೆಸುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಬಂದ್ ಕಾರ್ಯಕ್ರಮವನ್ನು ರದ್ದು ಮಾಡಿಲ್ಲ, ಮುಂದೂಡಿದ್ದೇವೆ. ಎಂಇಎಸ್ ನಿಷೇಧಿಸುತ್ತೇವೆ ಎಂದು ಸರ್ಕಾರ ಮಾತುಕೊಟ್ಟಿದೆ. ಇಂದು ಕರ್ನಾಟಕ ಬಂದ್ ಮಾಡುವುದು ಬೇಡ ಎಂದು ಸಾಕಷ್ಟು ಒತ್ತಡ ಬಂತು.
ಸರ್ಕಾರವು ಕೂಡ ಮನವಿ ಮಾಡಿತು. ಮನವಿಗೆ ಸ್ಪಂದಿಸಿ ನಾವು ಬಂದ್‍ನಿಂದ ಹಿಂದೆ ಸರಿದಿದ್ದೇವೆ. ಎಂಇಎಸ್ ನಿಷೇಧಿಸದಿದ್ದರೆ ಜನವರಿ ಮೂರನೆ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ಮತ್ತೊಂದು ಸುತ್ತಿನ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

