Breaking News

ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ.

ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು ಕೋರಿದರು. ಆದರೆ ಪೊಲೀಸರು ಅವಕಾಶ ಕೊಡಲಿಲ್ಲ. ಇದರಿಂದ ಕೋಪಗೊಂಡ ಪ್ರತಿಭಟನಕಾರರು ಕ್ರಾಂತಿಗೀತೆಗಳನ್ನು ಹಾಡುತ್ತಾ ಧರಣಿ ಕುಳಿತರು. ಎಂದಿನಂತೆ ರಂಗಾಯಣದ ಮುಂದಿನ ರಸ್ತೆಯಲ್ಲಿ ಸಂಚಾರವನ್ನು ಕೆಲಕಾಲದ ಮಟ್ಟಿಗೆ ನಿರ್ಬಂಧಿಸಲಾಗಿತ್ತು. ರಸ್ತೆಯ ಮತ್ತೊಂದು ತುದಿಯಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಬೆಂಬಲಿಗರು ಮೌನ ಪ್ರತಿಭಟನೆ ಮುಂದುವರಿಸಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *