ಪ್ರೇಮ್ ನಿರ್ದೇಶನದ “ಏಕ್ ಲವ್ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್‌ಲಿಸ್ಟ್ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ.

“ಮೀಟ್ ಮಾಡಣ ಇಲ್ಲ ಡೇಟ್ ಮಾಡಣ…’ ಎಂಬ ಹಾಡು ಎರಡು ಮಿಲಿಯನ್‌ಗೂ ಅಧಿಕ ಹಿಟ್‌ನೊಂದಿಗೆ ಮುನ್ನುಗ್ಗುತ್ತಿದೆ.
ಈ ಹಾಡಿಗೆ ವಿಜಯ್ ಈಶಯ್ ಸಾಹಿತ್ಯವಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ.
ಐಶ್ವರ್ಯಾ ರಂಗರಾಜನ್ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದ್ದು, ಹಾಡಿನಲ್ಲಿ ರಚಿತಾ ವಿಭಿನ್ನ ಗೆಟಪ್‌ಗಳಲ್ಲಿ ಮಿಂಚಿದ್ದಾರೆ. ಕರಿಯ ಜೋಗಿ, ರಾಜ್, ದಿ ವಿಲನ್.. ಹೀಗೆ ವಿಭಿನ್ನ ಗೆಟಪ್ ಗಮನ ಸೆಳೆಯುತ್ತಿದೆ.
ರಕ್ಷಿತಾ ಫಿಲಂ ಫ್ಯಾಕ್ಟರಿ ನಿರ್ಮಿಸಿರುವ ಈ ಚಿತ್ರದಲ್ಲಿ ರಾಣಾ, ರಚಿತಾ, ರೀಷ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಜ.21ರಂದು ತೆರೆ ಕಾಣಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

