Breaking News

ನ್ಯೂ ಇಯರ್‌ ಆಚರಣೆ ಇಲ್ಲ ಏನಿಲ್ಲ-ಹೇಗಿದೆ ನೋಡಿ ವಾಣಿಜ್ಯ ನಗರಿ ಹುಬ್ಬಳ್ಳಿ

ಹುಬ್ಬಳ್ಳಿ : ಹೊಸ ವರ್ಷ ಸಂಭ್ರಮಾಚರಣೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್​​​ಗಳು ನವಧುವಿನಂತೆ ಶೃಂಗಾರಗೊಳ್ಳುತ್ತಿದ್ದವು. ಜಗಮಗಿಸುವ ಲೈಟಿಂಗ್, ಡಿಜೆ ಸೌಂಡ್​​​ಗೆ ಯುವಕರು ಸ್ಟೆಪ್ ಹಾಕಿ ಸಂಭ್ರಮಿಸುತ್ತಿದ್ದರು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆ​​ ಈ ಬಾರಿಯೂ ಸಂಭ್ರಮಾಚರಣೆಗೆ ಬ್ರೇಕ್​​ ಬಿದ್ದಿದೆ.

ರಾಜ್ಯದಲ್ಲಿ ಒಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ಎಂದಿನಂತೆ ರಾತ್ರಿ 10 ಗಂಟೆಗೆ ಎಲ್ಲವೂ ಬಂದ್​​ ಆಗಬೇಕು. ಡಿಜೆ, ಸಾಮೂಹಿಕ ಪಾರ್ಟಿ ನಡೆಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರ ನಿರ್ದೇಶನದಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸಾಮೂಹಿಕ ಆಚರಣೆ ಮಾಡದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನ ಪಾಲನೆ‌ ಮಾಡಲು ಹೋಟೆಲ್​​ ಮಾಲೀಕರಿಗೆ ಸೂಚಿಸಲಾಗಿದೆ.ಈ ಸಾರಿ ಧಾರವಾಡ ಜಿಲ್ಲೆಯಲ್ಲಿಯೂ ಯಾವುದೇ ಸಂಭ್ರಮಾಚರಣೆ ಇಲ್ಲ. ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಎಂದಿನಂತೆ ರಾತ್ರಿ 10ರವರೆಗೆ ಮಾತ್ರ ತಾರಾ ಹೋಟೆಲ್​​ಗಳು ಓಪನ್ ಇರಲಿದ್ದು,

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *